




ಬೆಳ್ತಂಗಡಿ: ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿಯ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾಭವನ ಲೋಕಾರ್ಪಣಾ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ, ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ. ಡಿ.7 ರಂದು ಬೆಳಿಗ್ಗೆ ಪುಣ್ಯಾಹ ವಾಚನ, ನವಕ ಕಲಶ, ಗಣಪತಿ ಹೋಮ ನಡೆಯಿತು.


1500 ಭಜಕರು ಭಾಗಿ: ಕಲ್ಲೇರಿಯಿಂದ ಕುಪ್ಪೆಟ್ಟಿಯವರೆಗೆ 1500 ಭಜಕರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಹಾರಾಜರಿಗೆ ಪೂರ್ಣಕುಂಭ ಸ್ವಾಗತ ಮತ್ತು ವೈಭವದ ಮೆರವಣಿಗೆ ನಡೆಯಿತು.

ರಾತ್ರಿ 7-45 ಗಂಟೆಗೆ ಭಜನಾ ಮಂದಿರದ ನೂತನ ರಾಜಗೋಪುರ ಲೋಕಾರ್ಪಣೆಯನ್ನು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಿದರು.


ರಾತ್ರಿ 8 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮ ದೀಪ ಪ್ರಜ್ವಲನೆಯನ್ನು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಿದರು. ಧಾರ್ಮಿಕ ಭಾಷಣವನ್ನು ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾಡಿದರು. ಶಶಿಧರ್ ಶೆಟ್ಟಿ ಬರೋಡ ಅಧ್ಯಕ್ಷತೆಯನ್ನು ವಹಿಸಿದ್ದರು.


ಕಾರ್ಯಕ್ರಮದಲ್ಲಿ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ, ಶಾಸಕ ಹರೀಶ್ ಪೂಂಜ, ಉದ್ಯಮಿ ಮೋಹನ್ ಕುಮಾರ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಂಗಳೂರು ಉದ್ಯಮಿ ನಾಗ ಅರ್ಜುನ್ ರಾವ್ , ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಅತುಲ್ ಕೆ.ಎನ್, ಶಂಕರಿ ಇಲೆಕ್ಟ್ರಿಕಲ್ಸ್ ಮಾಲಕ ರಾಜೇಶ್ ಶೆಟ್ಟಿ, ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷಲ್ ಓನರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಗಯಾ ಕ್ಷೇತ್ರದ ಪುರೋಹಿತ ಪವನ್ ಆಚಾರ್ಯ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಆಶೋಕ್ ಉಪಸ್ಥಿತರಿದ್ದರು.

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಕುಮಾರ್ ಕಡ್ತಿಲ ಸ್ವಾಗತಿಸಿ, ಮಂಗಳೂರು ಕುದ್ರೋಳಿ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಕಾರ್ಯಕ್ರಮ ನಿರೂಪಿಸಿದರು .









