Site icon Suddi Belthangady

ಇಂದಬೆಟ್ಟು: ಪಂಚಾಯತ್ ಮಟ್ಟದ 21ನೇ ಜನಸ್ಪಂದನ ಕಾರ್ಯಕ್ರಮ

ಇಂದಬೆಟ್ಟು: ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಜನರ ಬಳಿಗೆ ಬಂದು ನಿರ್ವಹಿಸುವ ಕೆಲಸವನ್ನು ಮಾಡುತ್ತಿದ್ದೇವೆ. ರಾಜ್ಯದ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 21ನೇ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಡಿ. 8ರಂದು ಇಂದಬೆಟ್ಟು ಸಂತ ಫ್ರಾನ್ಸಿಸ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಂದಬೆಟ್ಟು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚಾಯತ್ ಅಧ್ಯಕ್ಷೆ ಆಶಾಲತಾ, ಪಂಚಾಯತ್ ಉಪಾಧ್ಯಕ್ಷರು ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ, ಸ್ವಾಗತಿಸಿದರು.

Exit mobile version