ಡಾ.ಸುಬ್ರಹ್ಮಣ್ಯ ಭಟ್ ಅವರ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ಬಿಡುಗಡೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಅವರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7ರಂದು
ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು, ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಈ ಕಾದಂಬರಿಗೆ ಮುನ್ನುಡಿ ಬರೆದಿರುತ್ತಾರೆ. ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here