ನಡ: ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಜನರ ಬಳಿಗೆ ಬಂದು ನಿರ್ವಹಿಸುವ ಕೆಲಸವನ್ನು ಮಾಡುತ್ತಿದ್ದೇವೆ. ರಾಜ್ಯದ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 22ನೇ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಡಿ. 8ರಂದು ನಡ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪಂಚಾಯತ್ ಅಧ್ಯಕ್ಷೆ ಮಂಜುಳಾ, ಪಂಚಾಯತ್ ಉಪಾಧ್ಯಕ್ಷರು ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್, ಸ್ವಾಗತಿಸಿದರು.

