ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.
ಉಜಿರೆ ಎಸ್.ಡಿ.ಎಮ್ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕಿ ತ್ರಿವೇಣಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಶ್ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

