



ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪಂಚಾಯತ್ ವ್ಯಾಪ್ತಿಯ ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ , ಬೆಳಾಲು – ಮಂಗಳೂರು ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ, ಬೆಳಾಲಿನಲ್ಲಿ ಲೋ ವಾಲ್ ಟೇಜ್ ಸಮಸ್ಯೆಯಿದೆ ಹಾಗೆಯೇ ವನ್ಯಜೀವಿಗಳ ಉಪಟಳವಿದೆ ಎಂದು ಗ್ರಾಮಸ್ಥರ ಪರವಾಗಿ ಸುರೇಶ್ ಭಟ್ ಪರಂಗಾಜೆ ಹೇಳಿದರು.
ದೊಂಪದಪಲ್ಕೆ ಅಂಗನವಾಡಿ ಕೇಂದ್ರ ಆವರಣ ಗೋಡೆ ಮತ್ತು ಇಂಟರ್ ಲಾಕ್ ಅಳವಡಿಕೆಗೆ ಗ್ರಾಮಸ್ಥರು ಬೇಡಿಕೆ ಇಟ್ಟರು. ಕಳೆದ ಎರಡು ವರ್ಷದಲ್ಲಿ ತಾಲೂಕಿಗೆ ಎರಡು ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ಬಂದಿದೆ ಎಂದು ಶಾಸಕರು ಮಾಹಿತಿ ನೀಡಿದರು.


ಬೆಳಾಲಿಗೆ ಪಶು ವೈದ್ಯರು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದಾಗ ತಾಲೂಕಿನಲ್ಲಿ ಒಟ್ಟು 3 ಮಂದಿ ಪಶು ವೈದ್ಯರು ಇರುವ ಬಗ್ಗೆ ಹೆಚ್ಚುವರಿ ಜವಾಬ್ದಾರಿಯ ಪಶು ವೈದ್ಯರು ತಿಳಿಸಿದರು. ಕೂಡಲಕೆರೆ – ಮುಂಡ್ರೋಟ್ಟು ರಸ್ತೆ ದುರಸ್ತಿಗೊಳಿಸಿ ಎಂದು ಗ್ರಾಮಸ್ಥ ಬಾಲಕೃಷ್ಣ ಹೇಳಿದಾಗ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರ್ವೇ ನಡೆಸಲು ಶಾಸಕರು ಸೂಚಿಸಿದರು.
ಪಿನಾರಿಯಿಂದ ಕೊಲ್ಪಾಡಿ ರಸ್ತೆ ಸಂಪೂರ್ಣ ಹಾಳಾಗಿದ್ದು ದುರಸ್ಥಿ ಮಾಡಬೇಕು ಎಂದು ಸಹಕಾರ ಸಂಘದ ಮಾಜಿ ನಿರ್ದೇಶಕ ಎಸ್. ವಿಜಯ ಗೌಡ ತಿಸಿಸಿದರು.ಈ ಬಗ್ಗೆ ಶಾಸಕರು ಉತ್ತರಿಸಿ ಈ ರಸ್ತೆ ಬಗ್ಗೆ ಗಮನಕ್ಕೆ ಬಂದಿದೆ ಅನುದಾನ ಬಂದಾಗ
ಶೀಘ್ರದಲ್ಲಿ ಮಾಡಲಾಗುವುದು ಎಂದರು.
ಪಲ್ಲಿತಡ್ಕ ಎಂಬಲ್ಲಿ ನೀರಿನ ಟ್ಯಾಂಕ್ ಸೋರುತ್ತಿದೆ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ ಗೌಡ ಹೇಳಿದಾಗ ಅದನ್ನು ಪರಿಶೀಲಿಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪಂಚಾಯತ್ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳಾದ ಜಯಂತಿ, ಪ್ರೇಮಾ, ಸುರೇಂದ್ರ ಗೌಡ, ಸತೀಶ್ ಗೌಡ,ಯಶೋಧ ಎಸ್. ಜಯಂತ ಗೌಡ, ಕೃಷ್ಣಯ್ಯ ಆಚಾರ್ಯ, ಪ್ರವೀಣ್ ವಿಜಯ, ಯಶೋಧ,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ಶಶಿಧರ ಓಡಿಪ್ರೊಟ್ಟು ನಾಡ ಗೀತೆ ಹಾಡಿದರು. ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿದರು.









