ಬೆಳ್ತಂಗಡಿ: ಜೆಸಿಐ ಮಂಜುಶ್ರೀ “ಜೇಸಿ ಉತ್ಸವ 2025” ಡಿ.7ರಂದು ಬೆಳ್ತಂಗಡಿ ಸಮಾಜ ಮಂದಿರದ ಬಯಲು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುರಳಿಕೃಷ್ಣ ಇರ್ವತ್ರಾಯ ಅವರನ್ನು ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆ(ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ, ಶ್ರೀ ಕೃಷ್ಣ ಯೋಗಕ್ಷೇಮ – ಮನೆಬಾಗಿಲಿಗೆ ವೈದ್ಯಕೀಯ ಸೇವೆ)ಗಾಗಿ
“ಸಾಧನಾಶ್ರೀ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೆಸ್ಕಾಂ ನಿಗಮದ ಅಧ್ಯಕ್ಷ ಹರೀಶ್ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್ಪಿ ಸಿ.ಕೆ.ರೋಹಿನಿ, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

