ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಡಿ.8ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನೆರವೇರಿತು. ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಈ ಕ್ರೀಡಾಕೂಟದ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಸ್ವಾ| ಸ್ಕ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯು ನಮ್ಮ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಅತ್ಯಗತ್ಯ ಎಂದು ಹೇಳಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಬಾಡಿ ಬಿಲ್ಡರ್ ಮತ್ತು ಏಕಲವ್ಯ ಪ್ರಶಸ್ತಿ ವಿಜೇತ ರೋಷನ್ ಪೆರಾವೋ ಆಗಮಿಸಿ, ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಉನ್ನತಿ ಸಾಧಿಸಲು ಬೇಕಾಗುವ ಗುಣಗಳನ್ನು ಕ್ರೀಡೆ ನಮಗೆ ಒದಗಿಸುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಸ್ವಾಭಾವಿಕ ಆದರೆ ಮುಖ್ಯವಾದದ್ದು ಭಾಗವಹಿಸುವ ಮನೋಭಾವ ಎಂದು ಹೇಳಿ ಶುಭ ಹಾರೈಸಿದರು.
ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚೇತನ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ, ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೋ ಡೇಸ, ಸಿ|ಲೂಸಿ ಡಿಸೋಜ, ಸಿ। ಹಿಲ್ಲಾ ಮಸ್ಕರೇನಸ್, ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ರಶ್ಮಿತಾರವರು ಸ್ವಾಗತಿಸಿ, ಸಹ ಶಿಕ್ಷಕರಾದ ಜೆರಾಲ್ಡ್ ಡಿಸೋಜಾ ಮತ್ತು ಐಡ ಡಿಕುನ್ಹರವರು ನಿರೂಪಿಸಿ, ರೀಮಾ ರೋಡ್ರಿಗಸ್ ರವರು ಧನ್ಯವಾದವನ್ನು ಸಮರ್ಪಿಸಿದರು.

