ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಇಂದುಮತಿ ಮತ್ತು ಪಂಚಮಿ ಶಾಲಾ ಶಿಕ್ಷಣ ಇಲಾಖೆಯ ( ಪದವಿಪೂರ್ವ) ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ
ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪಂಚಮಿ, ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಗೌರವ ತಂದ ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.

