Site icon Suddi Belthangady

ಬದನಾಜೆ: ಉಜಿರೆ ಎಸ್.ಡಿ.ಎಂ. ಕಾಲೇಜು ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಉಚಿತ ಆರೋಗ್ಯ ಶಿಬಿರ

ಬೆಳ್ತಂಗಡಿ: ಬದನಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಯೂತ್ ಫಾರ್ ಮೈ ಭಾರತ್ – ಯೂತ್ ಫಾರ್ ಡಿಜಿಟಲ್ ಲಿಟ್ರಸಿ’ ಥೀಂ ಅಡಿಯಲ್ಲಿ ಆಯೋಜಿಸಿದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕಗಳ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮೂರನೇ ದಿನ ಡಿ.7ರಂದು ಉಚಿತ ಆರೋಗ್ಯ ಶಿಬಿರ ಜರಗಿತು.

ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಬೆಳ್ತಂಗಡಿ ರೋಟರಿ ಕ್ಲಬ್, ಎಸ್.ಡಿ.ಎಂ. ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗ ಹಾಗೂ ಬದನಾಜೆ ಶಾಲಾ ಅಭಿವೃದ್ಧಿ ಸಮಿತಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಿಬಿರವನ್ನು ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಹೆಚ್. ದೀಪ ಬೆಳಗಿಸಿ ಉದ್ಘಾಟಿಸಿದರು.

ಶಿಬಿರದಿಂದ ಆರೋಗ್ಯ ಪ್ರಯೋಜನಗಳನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಅವರು ಆಶಿಸಿದರು.

ಮುಖ್ಯ ಅತಿಥಿ, ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ, ಊರಿನ ಜನರು ಈ ಉಚಿತ ಆರೋಗ್ಯ ಶಿಬಿರದ ಫಲಾನುಭವಿಗಳಾಗಬೇಕು. ಮಕ್ಕಳ ಆರೋಗ್ಯದ ಕುರಿತು ಹೆತ್ತವರು ಗಮನ ಹರಿಸುವುದು ಬಹಳ ಅಗತ್ಯ ಎಂದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಉದ್ಯಮಿ ಮಧುಸೂದನ್ ಎಂ.ಜಿ., ಮೂಡಿಗೆರೆ ತಾಲೂಕಿನ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮತ್ತು ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಶಿವರಾಮ ಗೌಡ ಪಿ., ನಿವೃತ್ತ ಪಿಡಿಒ ಸಂಜೀವ್ ನಾಯ್ಕ, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಬಿ.ಆರ್. ಸಂಜೌತ್ ಶುಭ ಹಾರೈಸಿದರು.

ರಾ.ಸೇ.ಯೋ. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಬದನಾಜೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಆಯೋಜಿಸಿದ ಆಟೋಟ ಸ್ಪರ್ಧೆಯ ಉದ್ಘಾಟನೆ ನೆರವೇರಿತು.

ಗ್ರಾಮ ಪಂಚಾಯತ್ ಸದಸ್ಯ ಇಲಿಯಾಸ್, ಎಸ್.ಡಿ.ಎಂ. ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಡಾ. ಅಭಿಜಿತ್ ಬಡಿಗೇರ, ಬದನಾಜೆ ಶಾಲೆ (ಪ್ರಾಥಮಿಕ) ಮುಖ್ಯೋಪಾಧ್ಯಾಯ ನಿರಂಜನ್, ರಾ.ಸೇ.ಯೋ. ವಿಶೇಷ ಶಿಬಿರದ ಸ್ವಾಗತ ಸಮಿತಿ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅನಿಲ್ ಡಿ’ಸೋಜಾ, ಶಿಬಿರ ಅಧಿಕಾರಿಗಳಾದ ಪ್ರವೀಣ್ ಮತ್ತು ಮಂಜುಶ್ರೀ, ಪ್ರಗತಿ ಯುವಕ ಮಂಡಳಿ ಮತ್ತು ಮಹಿಳಾ ಮಂಡಳಿ ಸದಸ್ಯರು, ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು, ಗ್ರಾಮಸ್ಥರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡದಿಂದ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ, ಉಬ್ಬಸ, ಅಸ್ತಮಾ, ನರರೋಗ, ಹೃದಯ ಸಂಬಂಧಿ ರೋಗಗಳು, ಕಣ್ಣಿನ ಪರೀಕ್ಷೆ, ಎಲುಬು, ಮೂಳೆ ತಪಾಸಣೆ, ಕಿವಿ ಮೂಗು ಗಂಟಲು ತಪಾಸಣೆ ಹಾಗೂ ರಕ್ತದ ಗುಂಪು ವರ್ಗೀಕರಣ ಸೌಲಭ್ಯ ಒದಗಿಸಲಾಯಿತು. ಸುಮಾರು 350ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ಬದನಾಜೆ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಜಮುನಾ ಕೆ.ಎಸ್. ಸ್ವಾಗತಿಸಿದರು. ರಕ್ಷಾ ಆರ್. ದೇವಾಡಿಗ ನಿರೂಪಿಸಿದರು. ಯೋಜನಾಧಿಕಾರಿ ಮಾಲಿನಿ ಅಂಚನ್ ವಂದಿಸಿದರು.

Exit mobile version