ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಹಾಸನ ಮತ್ತು ಸಹಕಾರ ಇಲಾಖೆ, ಹಾಸನ ಅವರ ಸಂಯುಕ್ತ ಆಶ್ರಯದಲ್ಲಿ
ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಾಸನದಲ್ಲಿ ಏರ್ಪಡಿಸಲಾಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಸಹಕಾರ ಸಂಘಗಳಿಂದ ಅಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವನಾಧಿಕಾರಿ, ಹಾಗೂ ಸಿಬ್ಬಂದಿ ವರ್ಗದವರು ಈ ಒಂದು ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿ ಸದಸ್ಯರ ಹಾಗೂ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಪಾತ್ರ, ಸಹಕಾರ ಅಧಿಕಾರಿಗಳಿಗೆ ಕ್ರಿಟಿಕಲ್ ಥಿಂಕಿಂಗ್, ಒತ್ತಡ ನಿರ್ವಹಣೆ ಮತ್ತು ಸಾಫ್ಟ್ ಸ್ಕಿಲ್ಸ್ ಸಾಮರ್ಥ್ಯ ವೃದ್ಧಿ, ಸಹಕಾರ ಸಂಘಗಳಿಗೆ ಅನ್ವಯಿಸುವ ತೆರಿಗೆಯ ಕಾಯ್ದೆಯ ಅಂಶಗಳು, ಶತಮಾನ ಕಂಡ ಸಹಕಾರ ಮಹಾಮಂಡಳದ ಕಾರ್ಯ ಚಟುವಟಿಕೆಗಳು, ಸಾಧನೆ ಮತ್ತು ಭವಿಷ್ಯದ ಚಿಂತನೆ ಮುಂತಾದ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ಒದಗಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ವಲೇರಿಯನ್ ರೊಡ್ರಿಗಸ್, ನಿರ್ದೇಶಕ ಸುನಿಲ್ ಸಂತೋಷ್ ಮೊರಾಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲ್ಸನ್ ನೆಲ್ಸನ್ ಮೋನಿಸ್ ಭಾಗವಹಿಸಿದರು.

LEAVE A REPLY

Please enter your comment!
Please enter your name here