ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ಯೂನಿವರ್ಸಿಟಿ ಮಟ್ಟದ ಹುಡುಗರ ಹಾಗೂ ಹುಡುಗಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟದ ಸಮಾರೋಪ ಸಮಾರಂಭವು ಡಿ.10ರಂದು ಕಾಲೇಜು ಮೈದಾನದಲ್ಲಿ ನಡೆಯಿತು.
ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ಅವರು ವಹಿಸಿದ್ದರು.
ಡಿ.9 ಹಾಗೂ ಡಿ.10ರಂದು ಎರಡು ದಿನಗಳ ಕಾಲ ನಡೆದ ಈ ಟೂರ್ನಮೆಂಟ್ ನಲ್ಲಿ ಒಟ್ಟು 48 ತಂಡಗಳು ಭಾಗವಹಿಸಿದ್ದು ಮೆನ್ಸ್ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಪ್ರಥಮಸ್ಥಾನ, ಎಸ್ ಎಂ ಎಸ್ ಬ್ರಹ್ಮಾವರ ದ್ವಿತೀಯ ಸ್ಥಾನ ಹಾಗೂ ವುಮೆನ್ಸ್ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಪ್ರಥಮ ಸ್ಥಾನ ಹಾಗೂ ಬೆಳ್ತಂಗಡಿ ಸ.ಪ್ರ.ದ. ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಕಾಲೇಜು ಗುರುವಾಯನಕೆರೆಯ ಪ್ರಾಂಶುಪಾಲ ಡಾ. ಪ್ರಜ್ವಲ್, ನಿವೃತ್ತ ಪ್ರಾಂಶುಪಾಲ ಡಾ. ಶರತ್ ಕುಮಾರ್ ಟಿ.ಕೆ., ಬೆಳ್ತಂಗಡಿ ಸ. ಪ್ರ. ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ, ವಿಟ್ಲ ಸ. ಪ್ರ. ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೇಸಪ್ಪ, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್, ಕಾಲೇಜು ಪೋಷಕ-ಶಿಕ್ಷಕರ ಸಂಘದ ಕಾರ್ಯದರ್ಶಿ ಪ್ರಮೀಳಾ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪದ್ಮನಾಭ, ಡಾ. ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಎಸ್, ರವಿಕುಮಾರ್ ಸೇರಿದಂತೆ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ತಾಂತ್ರಿಕ ನಿರ್ದೇಶಕರು, ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪುರುಷೋತ್ತಮ್ ಭಟ್ ಸ್ವಾಗತಿಸಿ, ಧನ್ಯವಾದವಿತ್ತರು.

