



ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಡಿ.11ರಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಹಯೋಗದೊಂದಿಗೆ “ನಮ್ಮ ನಡೆ ಸ್ವಚ್ಛತೆಯ ಕಡೆ” ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು “ವೈಜ್ಞಾನಿಕವಾಗಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿತ್ತು. ಸಾಹಸ್ ತಂಡದ ಮೇಲ್ವಿಚಾರಕ ಸುಭಾಷ್ ನಮ್ಮ ಮನೆಯ ಹಾಗೂ ಪರಿಸರದ ತ್ಯಾಜ್ಯ ನಿರ್ವಹಣೆ ಮಾಡುವ ವಿಧಾನಗಳ ಬಗ್ಗೆ ದೃಶ್ಯ ಮಾಧ್ಯಮದ ಮೂಲಕ ಮಾಹಿತಿ ನೀಡಿದರು.



ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಬ್ಲೆಂಡಿನ್ ರೋಡ್ರಿಗಸ್ ಸ್ವಾಗತಿಸಿ, ಪಟ್ಟಣ ಪಂಚಾಯತ್ ಸಿಬ್ಬಂದಿಗಳಾದ ಗಾಯತ್ರಿ ಮತ್ತು ರಂಜಿತರವರು ಸಹಕರಿಸಿದರು. ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹೆಲೆನ್ ತಾವ್ರೋ ವಂದಿಸಿದರು.









