





ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು. ಹಾಗೂ ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.









