Site icon Suddi Belthangady

ಬೆಳ್ತಂಗಡಿ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೊಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಆಟೋಟ ಸ್ಪರ್ಧೆಯ ಉದ್ಘಾಟಕರಾಗಿ ಆಧ್ಯಾತ್ಮಿಕ ಜೀವನ ತರಬೇತುದಾರರಾದ ರೇಷ್ಮಾ ರಾಜಿತ್ ಆಗಮಿಸಿ, ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾದದು ಎಂದು ತಿಳಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಹೇಮಲತಾ ಎಂ. ಆರ್. ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಎನ್. ರವರ ನೇತೃತ್ವದಲ್ಲಿ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಬಳಗದ ಸಹಕಾರದೊಂದಿಗೆ ಆಟೋಟ ಸ್ಪರ್ಧೆಯು ಯಶಸ್ವಿಗೊಂಡಿತು. ಶಿಕ್ಷಕ ಮುರಳಿ ಪಿ. ಯವರು ಸ್ವಾಗತಿಸಿ, ನಿರೂಪಿಸಿ ಧನ್ಯವಾದವಿತ್ತರು.

Exit mobile version