ಬೆಳ್ತಂಗಡಿ: ತಾಲೂಕು ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿ ರಬ್ಬರ್ ಬೆಳೆಗಾರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವಂತಹ ಸಂಸ್ಥೆಯ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಿಕ ವಸಂತ ರಾವ್ ಅವರನ್ನು ಗೌರವಿಸಲಾಯಿತು. ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಅನಂತ ಭಟ್ ಎಂ. ಸ್ವಾಗತಿಸಿದರು. ಸಂಘದ ನಿರ್ದೇಶಕರಾದ ಗ್ರೇಶಿಯನ್ ವೇಗಸ್, ಕೆ. ಬಾಲಕೃಷ್ಣ ಗೌಡ,ಹೆಚ್. ಪದ್ಮ ಗೌಡ, ಕೆ. ಜೆ. ಆಗಸ್ಟಿನ್, ರಾಮ ನಾಯ್ಕ್, ಭೈರಪ್ಪ, ಹರೀಶ್ ರಾವ್, ಭರತ್ ಕುಮಾರ್ ಹೆಚ್. ಶಾಜಿ ಪಿ. ಎ. ಉಪಸ್ಥಿತರಿದ್ದರು. ಶಾಖೆಯ ಪ್ರಬಂಧಕ ಸಂದೇಶ್ ಸಹಕರಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

