ಬೆಳ್ತಂಗಡಿ: ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಯೋಜನಾ ಕಚೇರಿಯ ಮಾರ್ಗದರ್ಶನದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿಯನ್ನು ಕುಕ್ಕೇಡಿ ಪಂಚಾಯತ್ ಅಧ್ಯಕ್ಷೆ ಅನಿತಾ ಉದ್ಘಾಟನೆ ಮಾಡಿದರು. ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ತಾಲೂಕು ಯೋಜನಾಧಿಕಾರಿ ಅಶೋಕ್, ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ, ವಲಯ ಮೇಲ್ವಿಚಾರಕಿ ಹೇಮಾವತಿ ಅವರು ಉಪಸ್ಥಿತರಿದ್ದರು.

