Site icon Suddi Belthangady

ಧರ್ಮಸ್ಥಳ: ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಹೇಮಾವತಿ ವೀ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭಕೋರಿದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್‌ ಕೃಷ್ಣ ಪಡುಟ್ನಾಯ, ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಶಮಾನೋತ್ಸವ ಸಮಿತಿಯ ಶಾಲಾ ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖ‌ರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾ‌ರ್, ವಿದ್ಯಾರ್ಥಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷೆ ಪ್ರತಿಮಾ, ದಿಶಾ ಫುಡ್ ಕಾರ್ನರ್ ಮಾಲೀಕ ಅರುಣ್‌ ಕುಮಾರ್, ನಿವೃತ್ತ ಬ್ಯಾಂಕ್‌ ಮ್ಯಾನೇಜ‌ರ್ ರವೀಂದ್ರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ. ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Exit mobile version