ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್. ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ವೃತ್ತಿ ಶಿಕ್ಷಣ; ಮಾರ್ಗದರ್ಶನ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಗಾರವನ್ನು ಡಿ. 13ರಂದು ಆಯೋಜಿಸಲಾಯಿತು. ಭವಿಷ್ಯದ ವೃತ್ತಿ ಆಯ್ಕೆ, ಉನ್ನತ ಶಿಕ್ಷಣದ ಅವಕಾಶಗಳು, ಕೌಶಲ್ಯ ಅಭಿವೃದ್ಧಿ ಮತ್ತು ವೈಯಕ್ತಿಕ ಆಸಕ್ತಿ ಸಾಮರ್ಥ್ಯವನ್ನು ಗುರುತಿಸುವ ಬಗ್ಗೆ ಅರಿವು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಪ್ರೌಢ ವಿಭಾಗದ ಸಹಶಿಕ್ಷಕಿ ಶ್ರೀಮತಿ ದಿವ್ಯಶ್ರೀ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿ ನಾದ ಮಣಿನಾಲ್ಕೂರು ಅವರ ಪರಿಚಯವನ್ನು ತಿಳಿಸಿದರು.

10 ವರ್ಷಗಳಿಂದ “ಕತ್ತಲ ಹಾಡು” ಮೂಲಕ ರಾಜ್ಯಾದ್ಯಂತ ಪ್ರಸಿದ್ಧರಾಗಿರುವ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಇಂದಿನ ಯುಗದಲ್ಲಿ ವೃತ್ತಿ ಅವಕಾಶಗಳ ವೈವಿಧ್ಯತೆ, ಕೌಶಲ್ಯಾಧಾರಿತ ಶಿಕ್ಷಣದ ಅಗತ್ಯತೆ ಮತ್ತು ವಿದ್ಯಾರ್ಥಿಗಳು ತಮ್ಮ ಆಸಕ್ತಿ ಸಾಮರ್ಥ್ಯಕ್ಕೆ ತಕ್ಕಂತೆ ಕ್ಷೇತ್ರವನ್ನು ಆಯ್ಕೆ ಮಾಡುವ ಮಹತ್ವವನ್ನು ಚಟುವಟಿಕೆಯ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಮುಖ್ಯ ಶಿಕ್ಷಕಿ ವಿಜಯ ಕೆ., ಸಂಯೋಜಕ ಯಶವಂತ ಜಿ. ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here