





ವೇಣೂರು: ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಾರ್ಗದರ್ಶನದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಶುಭಾಶೀರ್ವಾದದೊಂದಿಗೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವೇಣೂರು ವಲಯದ ಹೊಸಪಟ್ಣದಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಉದ್ಘಾಟನೆ ಮಾಡಿದರು. ಒಕ್ಕೂಟದ ಅಧ್ಯಕ್ಷ ಪೂವಪ್ಪ ಪೂಜಾರಿ, ಜ್ಞಾನ ವಿಕಾಸ ತಾಲೂಕು ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ, ವಲಯ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ನಳಿನಿ ಉಪಸ್ಥಿತರಿದ್ದರು.









