





ಬೆಳ್ತಂಗಡಿ: ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರ 1. ಕೋಟಿ 71 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕೆ, ಸರಕಾರಿ ಪ್ರೌಢ ಶಾಲೆ ನಾವೂರು ಸರಕಾರಿ ಪ್ರೌಢ ಶಾಲೆ ಕಲ್ಮಂಜ, ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲು, ಸರಕಾರಿ ಪ್ರೌಢ ಶಾಲೆ ಬಳೆಂಜ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಿರೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ- ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 1. ಕೋಟಿ 71 ಲಕ್ಷ ಅನುದಾನ ಸರ್ಕಾರ ಮಂಜೂರು ಮಾಡಿದೆ ಎಂದು ರಕ್ಷಿತ್ ಶಿವರಾಂ ತಿಳಿಸಿದ್ದಾರೆ.









