



ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿನ ವಾರ್ಷಿಕ ಕ್ರೀಡಾಕೂಟವು ಕುಕ್ಕೇಡಿ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ವೇಣೂರು ಆರಕ್ಷಕ ಉಪನೀರೀಕ್ಷಕ ಅಕ್ಷಯ್ ಡಿ., ಅವರು ಭಾಗವಹಿಸಿ ಧ್ವಜಾರೋಹಣಗೈದು ಕ್ರೀಡಾ ಕೂಟವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಮಾತಾನಾಡಿ ವಿದ್ಯಾರ್ಥಿಗಳಿಗೆ ಶಿಸ್ತು, ದೈಹಿಕ ಆರೋಗ್ಯ ಹಾಗೂ ಕ್ರೀಡೆಯ ಮಹತ್ವವನ್ನು ವಿವರಿಸಿದರು.


ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗಂಗಾಧರ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.
ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿ ಜಗನ್ನಾಥ ದೇವಾಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸುಮಾರು ರೂಪಾಯಿ 17,000 ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು
ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ. ಆರ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಪಠ್ಯದ ಜೊತ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕೇಂದು ಕರೆನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ರೀಡಾ ಸಂಚಾಲಕ ವಿನಯಚಂದ್ರರಾಜ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರೀಧರ ಡಿ. ಬಹುಮಾನ ವಿಜೇತರ ಪಟ್ಟಿ ವಾಚಿಸಿ, ನುತಿಪ್ರಿಯ ಧನ್ಯವಾದಗೈದ ಕಾರ್ಯಕ್ರಮವನ್ನು ಪ್ರಸನ್ನ ಕುಮರ್ ನಿರ್ವಹಿಸಿದರು.









