




ಬೆಳ್ತಂಗಡಿ: ಡಿ.19ರಂದು ಹೋಲಿ ರಿಡೀಮರ್ ಆಡಿಟೋರಿಯಂನಲ್ಲಿ ನಡೆಯಲಿರುವ ಪ್ರತಿಷ್ಟಿತ ಬೆಳ್ತಂಗಡಿ ವಕೀಲರ ಸಂಘದ ಪದಗ್ರಹಣ ಸಮಾರಂಭದ ಪತ್ರಿಕಾಗೋಷ್ಠಿಯು ಡಿ.16ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನೆರವೇರಿಸಲಿದ್ದಾರೆ. ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಸರಕಾರಿ ವಕೀಲರಾದ ಮೆಲ್ವಿನ್ ಪ್ರಕಾಶ್ ನೋರೋನ್ಹ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಮನು ಬಿ.ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಮ್‌ಎಫ್‌ಸಿ ವಿಜಯೇಂದ್ರ ಟಿ.ಹೆಚ್., ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್, ಹೈಕೋರ್ಟ್ ವಕೀಲ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರ ಗೌರವ ಉಪಸ್ಥಿತಿ ಇರಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳ ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದು ಹಾಗೂ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್, ಡಿವೈಎಸ್ಪಿ ರೋಹಿಣಿ ಸಿ ಕೆ, ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವರ್ಗ, ಸರಕಾರಿ ಅಧಿಕಾರಿ ವರ್ಗ, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಗೂ ವಕೀಲ ವೃಂದದ ಕುಟುಂಬದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಜತೆ ಕಾರ್ಯದರ್ಶಿ ಹರ್ಷಿತ್ ಹೆಚ್., ಕೋಶಾಧಿಕಾರಿ ಮುಮ್ತಾಜ್ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಂದೀಪ್ ಡಿಸೋಜ ಹಾಗೂ ಉಷಾ ಎನ್. ಜಿ ಉಪಸ್ಥಿತರಿದ್ದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿ, ಜತೆ ಕಾರ್ಯದರ್ಶಿ ಹರ್ಷಿತ್ ಹೆಚ್ ವಂದಿಸಿದರು.









