ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಕ್ರೀಡಾ ಸಂಭ್ರಮ

0

ಬಂಗಾಡಿ: ಮಕ್ಕಳ ಮಾನಸಿಕ ಕ್ಷಮತೆ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಅತಿ ಅಗತ್ಯ ಎಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲl ಮುರಳಿ ಬಲಿಪ ಅವರು ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡಾ ಸಂಭ್ರಮವನ್ನು ಉದ್ಘಾಟಿಸಿ ತಿಳಿಸಿದರು.

ಲಯನ್ಸ್ ಕ್ಲಬ್ ನ ಮಾಜಿ ಪ್ರಾಂತೀಯ ಅಧ್ಯಕ್ಷ ಲlವಸಂತ ಶೆಟ್ಟಿ, ಶ್ರದ್ದಾ ಲl ರಾಮಕೃಷ್ಣ ಗೌಡ, ಉದ್ಯಮಿ ಸತ್ತಾರ್ ಸಾಹೇಬ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಂದ ಬಿ, ಮಾಜಿ ಅಧ್ಯಕ್ಷ ವಿದ್ಯಾಧರ ಜೈನ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಮಜಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲರವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಮಾತೆಯರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಶಿಕ್ಷಕ ಅಮಿತಾನಂದ ಹೆಗ್ಡೆಯವರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸುಭಾಷ್ ಜಾದವ್ ರವರು ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here