ಬೆಳ್ತಂಗಡಿ: ಮಂಗಳೂರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇವರು ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆಯ ಬೆಳ್ತಂಗಡಿ ಉಪಗ್ರಹ ಶಾಖೆಯ ಪ್ರತಿನಿಧಿಯಾಗಿದ್ದಾರೆ.
ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆಯಲ್ಲಿ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ಅಭ್ಯರ್ಥಿಯಾಗಿ ಸ್ಪರ್ಧೆ

