ಉರುವಾಲು: ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.
ದೇವಸ್ಥಾನ ಟ್ರಸ್ಟ್ ನಾ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

