





ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50 ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದು, ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಶಾಸಕ ಹರೀಶ್ ಪೂಂಜರವರು ಧನ್ಯವಾದ ಸಲ್ಲಿಸಿದ್ದಾರೆ.









