ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸೈಂಟ್ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ಸಾಮಾಜಿಕ ಪರಿಶೋಧನಾ ಪೋಷಕರ ಸಭೆ ಡಿ.17ರಂದು ನಡೆಯಿತು. ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಪಂ.ರಾ.ಇಂ.ವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರು ತಾರನಾಥ ಸಾಲ್ಯಾನ್ ಅವರು ವಹಿಸಿದ್ದರು. ಅವರು ತಮ್ಮ ಮಾತಿನಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೀಡುತ್ತಿರುವ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ಮಕ್ಕಳು ಪಡೆಯುತ್ತಿದ್ದು ಹೀಗೆ ಮುಂದುವರಿಯಬೇಕೆಂದು ತಿಳಿಸಿದರು. ಈ ಕುರಿತು ಪೋಷಕರೊಂದಿಗೆ ಸಂವಾದವನ್ನು ನಡೆಸಿದರು.
ಪರಿಶೋಧನಾ ಪ್ರಕ್ರಿಯೆ ಭಾಗವಾದ ದಾಖಲಾತಿಗಳ ಪರಿಶೀಲನೆ, ಭೌತಿಕ ಪರಿಶೀಲನೆ ಹಾಗೂ ಪೋಷಕರ ಮನೆ ಭೇಟಿಯ ಕುರಿತಾದ ಮಾಹಿತಿ ಸಂಗ್ರಹಣೆಯನ್ನು ಮಾಡಿ ವರದಿ ಮಂಡನೆ ಮಾಡಲಾಯಿತು. ಇದಕ್ಕೆ ಪೂರಕವಾಗಿ ಪೋಷಕರೊಂದಿಗೆ ಚರ್ಚೆ ನಡೆಸಿ ಅವರ ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆದುಕೊಳ್ಳಲಾಯಿತು. ಸಭೆಯಲ್ಲಿ ಮುಖ್ಯ ಶಿಕ್ಷಕಿ ರೀಟಾ ತಾವ್ರೋ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಜಯಲಕ್ಷ್ಮಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರತ್ನಾಕರ ಕೋಟ್ಯಾನ್, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಾಜಶ್ರೀ ಮತ್ತು ಮೇಘನಾ, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

