






ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಬುರುಡೆ ತಂದ ಪ್ರಕರಣದ ಆರೋಪಿ ಚಿನ್ನಯ್ಯ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದು ಡಿ.18ರಂದು ಧರ್ಮಸ್ಥಳ ಠಾಣೆಯಲ್ಲಿ ತನಗೆ ಮತ್ತು ಕುಟುಂಬಕ್ಕೆ ಜೀವಬೆದರಿಕೆ ಇದ್ದು ರಕ್ಷಣೆ ನೀಡಬೇಕೆಂದು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾನೆ.


ಅದರ ಪ್ರಕಾರ ತನಗೆ ಹಾಗೂ ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ರವರಿಗೆ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಜಯಂತ್, ಸಮೀರ್ ಎಂ.ಡಿ. ಮತ್ತು ಅವರ ಸಂಗಡಿಗರಿಂದ ಜೀವ ಬೆದರಿಕೆ ಇದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.









