






ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಡಿ.18ರಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್ ಅವರು ನೆರವೇರಿಸಿದರು. ಶಾಲೆಯ ಬಯಲು ರಂಗ ಮಂದಿರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.




ಉಜಿರೆ ಜನಾರ್ದನ ಸ್ವಾಮಿ ದೇಗುಲದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಬಾಗಲಕೋಟೆ ವಿವಿಯ ಕುಲ ಸಚಿವ ಡಾ. ಔದ್ರಮ, ಉದ್ಯಮಿ ಮೋಹನ್ ಕುಮಾರ್, ಶಾಲಾ ಶತಮಾನೋತ್ಸವ ಸಮಿತಿ ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ. ಸೋಮಶೇಖರ ಶೆಟ್ಟಿ, ಕಾರ್ಯದರ್ಶಿ ಅಬೂಬಕ್ಕರ್, ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ್ ಪಿ. ಮತ್ತಿತರರು ಉಪಸ್ಥಿತರಿದ್ದರು.
ಶಾಲೆಯಲ್ಲಿ ಹಲವು ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಮಧ್ಯಾಹ್ನ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.









