ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 17ರಂದು ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಉಪನ್ಯಾಸಕ ಹರಿಪ್ರಸಾದ್ ಡೆಚ್ಚಾರ್ ರವರು ತಮ್ಮ ದಿವ್ಯ ಹಸ್ತದಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕ ಪ್ರತಿಭಾ ದಿನಾಚರಣೆಗೆ ಚಾಲನೆಯನ್ನು ನೀಡಿದರು. ನಂತರ ಮಾತನಾಡಿದ ಹರಿಪ್ರಸಾದ್ ಅವರು ವಾರ್ಷಿಕ ಪ್ರತಿಬಾ ದಿನಾಚರಣೆ ಎಂಬುದು ವಿದ್ಯಾರ್ಥಿಗಳ ಪಾಲಿನ ಒಂದು ಸಂಭ್ರಮವಿದ್ದಂತೆ ಎಲ್ಲರೂ ಈ ದಿನದಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಪ್ರದರ್ಶನ ಮಾಡಿ ಎಂದು ಶುಭ ಹಾರೈಸಿದರು.

ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ. ಅವರು ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕ ಬಂಧುಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಸ್ವಾಗತಿಸಿದರು, ಶಾಲಾ ಶಿಕ್ಷಕರ ಗೌರೀಶ್ ಎಂ. ಧನ್ಯವಾದಗೈದರು.

LEAVE A REPLY

Please enter your comment!
Please enter your name here