






ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಮತ್ತು ಮಡಂತ್ಯಾರು ಸ್ಥಳೀಯ ಸಂಸ್ಥೆ ಅವರ ಸಹಭಾಗಿತ್ವದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ ವಿ. ಅವರು ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪದ್ಮಕುಮಾರ್, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಶಿಬಿರ ನಾಯಕರು ಶ್ರೀ ಗುರುಮೂರ್ತಿ ನಾಯ್ಕಪು LT(S),ಶಿಬಿರ ಸಹಾಯಕ ವಿನೋದ್ ಚೇವಾರ್ HWB(S), ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳ್ಳಿಯಪ್ಪ ಕೆ., ಕಾರ್ಯದರ್ಶಿ ಪ್ರಮೀಳಾ ಪೂಜಾರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಉಪಸ್ಥಿತರಿದ್ದರು.



ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.
ಸ್ವಯಂ ಸೇವಕರಾಗಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.
ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.
ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಯನ್ನು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ., ನಿರೂಪಣೆಯನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳಿಯಪ್ಪ ಕೆ., ಧನ್ಯವಾದ ಹಾಗೂ ಕಾರ್ಯಕ್ರಮದ ನೇತೃತ್ವವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ವಹಿಸಿದ್ದರು.









