ಬದನಾಜೆ: ಶಾಲೆಯ ಅಮೃತ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ-ಸುಜ್ಞಾನ ಸಭಾಂಗಣ ಲೋಕಾರ್ಪಣೆ

0

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ, ಸುಜ್ಞಾನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಜರುಗಿತು.

ಬದನಾಜೆ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಕೆ. ಮೋಹನ್ ಕುಮಾರ್ ಸುಜ್ಞಾನ ಸಭಾಂಗಣದ ಲೋಕಾರ್ಪಣೆ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೆರವೇರಿಸಿದರು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್ ಅವರು ಅಮೃತ ಪಥ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಶರಿ ಶು ಹಾರೈಸಿದರು,
ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯನಿವೃತ್ತ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ನಿವೃತ್ತ ಶಿಕ್ಷಕ ಶಿಕ್ಷಣ ಸಹಾಯಕರು ಬಾಬು ಗೌಡ
ಬಾಜಿಮಾರು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅನಿಲ್ ಡಿಸೋಜ, ಪ್ರೌಢ ಶಾಲಾ ಉಪಾಧ್ಯಕ್ಷೆ ಅರುಣಾಕ್ಷಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಂಜುನಾಥ್, ಬಿ.ಎಂ. ಇಲ್ಯಾಸ್, ಶೀನ ನಾಯ್ಕ, ಲಲಿತ, ಗುರುಪ್ರಸಾದ್, ನಾಗವೇಣಿ, ಸವಿತಾ, ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯ ಗೌಡ, ಸುಜ್ಞಾನ ನಿಧಿ ಯೋಜನೆ ಸಂಚಾಲಕ ಸುಂದರ ಬಂಗೇರ, ಉಪಸ್ಥಿತರಿದ್ದರು.

ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕರಿಗೆ, ವರ್ಗಾವಣೆ ಗೊಂಡ ಶಿಕ್ಷಕರಿಗೆ ಹಾಗೂ ಪ್ರಸ್ತುತ ಶಿಕ್ಷಕರಿಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಗೌರವ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಾಗೂ ಅಡುಗೆ ಸಿಬ್ಬಂದಿಗಳನ್ನೂ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ, ಶಿಕ್ಷಕ ಗೋಪಾಲ್ ಸಂಚಿಕೆಯ ಪರಿಚಯವನ್ನು ತಿಳಿಸಿದರು. ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ನಿರಂಜನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಮುನ ಕೆ.ಎಸ್. ವರದಿ ಮಂಡಿಸಿದರು. ಶಿಕ್ಷಕಿ ಪ್ರೀತಿ ಸಂದೇಶ ವಾಚಿಸಿದರು. ಶಿಕ್ಷಕರಾದ ಜಯಂತಿ, ಜಯ, ವನಿತಾ, ಸೌಮ್ಯ, ನೇತ್ರಾವತಿ ಸನ್ಮಾನಿತರ ವಿವರ ನೀಡಿದರು.

ಅಮೃತ ಮಹೋತ್ಸವ ಸಮಿತಿಯ ಉಪಾಧ್ಯಕ್ಷರು ಮೋಹನ್ ಪರಂಗಾಜೆ, ಸುರೇಶ್ ಮಾಚಾರು, ಕೋಶಾಧಿಕಾರಿ ಸೋಮಶೇಖರ ಗೌಡ, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪೀತಾಂಬಾರ ಪೂಜಾರಿ, ಸ್ಮರಣ ಸಂಚಿಕೆ ಸಹ ಸಂಚಾಲಕ ಮೋಹನ್ ಹೆಚ್ ಬಿ, ವಿವಿಧ ಉಪ ಸಮಿತಿಯ ಸದಸ್ಯರು, ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸದಸ್ಯರು ಪೋಷಕರು, ಊರವರು ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ, ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಿತು.

ಶಿಕ್ಷಕರಾದ ಜಯಲಕ್ಷ್ಮಿ ಮತ್ತು ರಾಮಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ದೈಹಿಕ ಶಿಕ್ಷಕ ವಿಠಲ ನಾಯ್ಕ ವಂದಿಸಿದರು.

LEAVE A REPLY

Please enter your comment!
Please enter your name here