ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

0

ಉಜಿರೆ: ವಿಶ್ವ ಧ್ಯಾನ ದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಉಜಿರೆಯ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಡಿ.20ರಂದು ಮಧ್ಯಾಹ್ನ 3:30 ಗಂಟೆಗೆ ಧ್ಯಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಜೀವ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಾಲಕೃಷ್ಣ ಶೆಟ್ಟಿ ಅವರು ಸ್ವಾಗತ ಭಾಷಣ ಮಾಡಿ ಆಗಮಿಸಿದ ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಹರೀಶ್ ಕೃಷ್ಣಸ್ವಾಮಿ ಅವರು ಧ್ಯಾನದ ಮಹತ್ವ ಹಾಗೂ ಪಂಚಕೋಶಗಳ ಮೇಲೆ ಧ್ಯಾನವು ಬೀರುವ ಪರಿಣಾಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಧ್ಯಾನವು ಮಾನವನ ದೈಹಿಕ, ಮಾನಸಿಕ ಮತ್ತು ಆತ್ಮೀಯ ಬೆಳವಣಿಗೆಗೆ ಅತ್ಯಂತ ಅವಶ್ಯಕವೆಂದು ಅವರು ತಿಳಿಸಿದರು.

ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದ ಶಾಂತಾರಾಮ್ ಪೈ ಅವರು ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಕುರಿತು ಸಂತೋಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಧ್ಯಾನವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತಾ ಕೆ.ಜೆ. ಅವರು ವಹಿಸಿ ಮಾತನಾಡಿ, ಧ್ಯಾನವು ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ನಿತ್ಯ ಧ್ಯಾನವು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳನ್ನು ಧ್ಯಾನ ಅಭ್ಯಾಸಕ್ಕೆ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ವಂದನಾರ್ಪಣೆಯನ್ನು ಡಾ. ಹರ್ಷಿಣಿ ಅವರು ನೆರವೇರಿಸಿದರು. ಕಾರ್ಯಕ್ರಮವು ಶಿಸ್ತಿನಿಂದ ಹಾಗೂ ಯಶಸ್ವಿಯಾಗಿ ಸಂಪನ್ನವಾಯಿತು.

LEAVE A REPLY

Please enter your comment!
Please enter your name here