ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

0

ವೇಣೂರು: ಜಿಲ್ಲಾ ಉಪ ನಿರ್ದೇಶಕರ ಕಚೇರಿ ಹಾಗೂ ಮೂಡಬಿದ್ರೆ, ಅಲಂಗಾರು ಸೈಂಟ್ ಥೋಮಸ್ ಶಾಲೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿಕಾ ಎನ್. ಎಸ್. ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಅಮೋಘ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಧನುಶ್ರೀ ಎಸ್. ಕುಲಾಲ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ತೇಜಸ್ವಿ ಪಿ. ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ, ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.
ಸ್ಪರ್ಧೆಯಲ್ಲಿ ವಿಜೇತರಾದ ನಮ್ಮ ವಿದ್ಯಾರ್ಥಿಗಳಿಗೆ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರು ಹಾಗೂ ಸದಸ್ಯರುಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here