ಬದನಾಜೆ ಶಾಲೆಯ ಅಮೃತ ಮಹೋತ್ಸವ: ಸಮಾರೋಪ ಸಮಾರಂಭ

0

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಡಿ. 22ರಂದು ನಡೆಯಿತು. ಕಾರ್ಯಕ್ರಮವನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸಂಸ್ಕಾರ ಭಾರತಿ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ. ಎಸ್. ಶಾಲೆಯ ಹಿರಿಯ ವಿದ್ಯಾರ್ಥಿ ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಮಾನವ ಸಂಪಲಮುನ ಅಧಿಕಾರಿ ಚಿತ್ತಾರ, ಪಿಲ್ಯ ಸ. ಹಿ. ಪ್ರಾ. ಶಾಲಾ ಜಿ. ಪಿ.ಟಿ ಶಿಕ್ಷಕಿ ಸುನಂದಾ ಮುಖ್ಯ ಅತಿಥಿಗಳಾಗಿ ಭಾಗವಸಿದ್ದರು. ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯ ಗೌಡ, ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅನಿಲ್ ಡಿಸೋಜ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಮುನ ಕೆ.ಎಸ್. ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ನವೀನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಹಕರಿಸಿದ ಧರ್ಮದರ್ಶಿ ಹರೀಶ್ ಆರಿಕೋಡಿ, ಸಮಿತಿ ಯ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ಪ್ರಧಾನ ಕಾರ್ಯದರ್ಶಿ ನಿರಂಜನ್, ಶಾಲೆಯಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ದಿ. ಕೂಸಪ್ಪ ಗೌಡರ ಪರವಾಗಿ ಪುತ್ರ ಪ್ರಕಾಶ್, ಗೋಪಾಲಕೃಷ್ಣ ಉಪಾಧ್ಯಾಯ, ಇಲಿಯಾಸ್ ಬಿ.ಎಂ. ಪ್ರಸ್ತುತ ಅಧ್ಯಕ್ಷ ಅನಿಲ್ ಡಿಸೋಜ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮಯ್ಯ ಗೌಡ, ಮೋಹನ ಗೌಡ ಪರಂಗಾಜೆ, ಸರಕಾರಿ ಸೇವೆ ಪಡೆದು ಕೊಂಡ ಹಿರಿಯ ವಿದ್ಯಾರ್ಥಿಗಳಾದ ಬಾಬು ಗೌಡ, ಗೋಪಾಲ್, ಸುರೇಶ್ ಮಾಚಾರ್, ಶಿವರಾಮ್ ಪಿ., ಚಿತ್ತಾರ, ಸುನಂದಾ, ಜಲಜ ಎಂ., ಶ್ರೀನಿವಾಸ ಶೆಟ್ಟಗಾರ್, ರಾಜೇಶ್ವರಿ, ಜೀವಿತಾ, ರಘುರಾಮ ಪರಂಗಾಜೆ, ಶಕುಂತಲಾ ಎಂ. ಬಿ., ಮೋಹನ್ ಹೆಚ್. ಬಿ.ಅವರನ್ನು ಸನ್ಮಾನಿಸಲಾಯಿತು.

ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಉಪಾಧ್ಯಕ್ಷ ಮೋಹನ್ ಪರಂಗಾಜೆ ಸ್ವಾಗತಿಸಿ, ಶಿಕ್ಷಕರಾದ ಭಾರತಿ ಎಸ್. ಎನ್, ಪ್ರತಿಭಾ ಕುಮಾರಿ, ರಾಮಕೃಷ್ಣ ಭಟ್, ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಖ್ಯ ಶಿಕ್ಷಕ ನಿರಂಜನ್ ವಂದಿಸಿದರು.

LEAVE A REPLY

Please enter your comment!
Please enter your name here