








ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಉಪ ನಿರ್ದೇಶಕರ ಕಛೇರಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಡಿ.23ರಂದು ನಡೆದ ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿನಿ ಅನ್ವಿತಾ ಎ. ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇದೇ ರೀತಿಯಾಗಿ ಸಹಕಾರಿ ಒಕ್ಕೂಟ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಮಾಧಾನಕರವಾದ ಬಹುಮಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ವಿಜೇತ ವಿದ್ಯಾರ್ಥಿಗೆ ಸಂಸ್ಥೆಯ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, ಹಾಗೂ SDMC ಕಾರ್ಯಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.









