






ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು.
ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರ ಸ್ವಾ| ಸ್ಪ್ಯಾನಿ ಗೋವಿಯಸ್ ರವರು ವಹಿಸಿದ್ದರು.


ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕ್ರಿಸ್ಮಸ್ ಹಬ್ಬವು ಪ್ರೀತಿ, ಶಾಂತಿ ಮತ್ತು ಸಂತೋಷದ ಸಂಕೇತವಾಗಿದೆ ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸ್ವಾ|ಲ್ಯಾನ್ಸಿ ನೋಯಲ್ ರೆಬೆಲ್ಲೋ ರವರು ಆಗಮಿಸಿ, ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ನಮ್ಮ ಹೆತ್ತವರೊಂದಿಗೆ ಶಿಕ್ಷಕರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಬೇಕು ಆಗ ನಾವು ನಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣುತ್ತೇವೆ. ನಮ್ಮ ಜೀವನದಲ್ಲಿ ಹೆತ್ತವರನ್ನು ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೊ ಡೇಸ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್, ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಲಿಯೋ ನೊರೊಡ್ಡ, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಚೇತನ, ಸೇಕ್ರೆಡ್ ಹಾರ್ಟ್ ಕಾನ್ವೆಂಟಿನ ಸಿ| ಅನಿತಾ ಫೆರ್ನಾಂಡಿಸ್ ಮತ್ತು ಸಿ| ಅಂಜಲಿಯಾ ಫೆರ್ನಾಂಡಿಸ್, ಶಾಲಾ ಆಡಳಿತ, ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ಸ್ವಾಗತಿಸಿ, ವಿದ್ಯಾರ್ಥಿಗಳು ನಿರೂಪಿಸಿದರು. ಹವನ ಪ್ರಭು ಧನ್ಯವಾದವನ್ನು ಸಮರ್ಪಿಸಿದರು. ನಂತರ ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು.









