







ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ಡಿ. 24, 25 ರಂದು ನಡೆಯಲಿದ್ದು ಇದರ ಅಂಗವಾಗಿ ಡಿ. 24 ರಂದು ಊರ ಭಕ್ತಾಭಿಮಾನಿಗಳಿಂದ ಶ್ರೀಕ್ಷೇತ್ರಕ್ಕೆ ಬೆಳಾಲು ಪೇಟೆಯಿಂದ ಭವ್ಯ ಮೆರವಣಿಗೆಯೊಂದಿಗೆ ಸಾಗಿ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.





ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ಅಕ್ಷೋಭ್ಯ ಅನ್ನಛತ್ರವನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ಆರಿಕೋಡಿ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರ ಲಿಂಗಪ್ಪ ಪೂಜಾರಿ ಬನಂದೂರು, ಅಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಕಾರ್ಯದರ್ಶಿಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಮಹಿಳಾ ಸಮಿತಿ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ, ಉಜಿರೆ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ಜತ್ತನ್ನ ಗೌಡ, ಜಾತ್ರೋತ್ಸವ ಸಮಿತಿಯಮಾಜಿ ಪ್ರಧಾನ ಸಂಚಾಲಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಮತ್ತು ಭಗವಧ್ಭಕ್ತರು ಉಪಸ್ಥಿತರಿದ್ದರು.









