ಮಡಂತ್ಯಾರು: ಬಂಗೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮ

0

ಮಡಂತ್ಯಾರು: ಬಂಗೇರಕಟ್ಟ, ಸಾಲುಮರ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರ ಮಕ್ಕಳ ಬಾಲ ಮೇಳ ಕಾರ್ಯಕ್ರಮ ಡಿ. 23ರಂದು ಜರಗಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಗ್ರಾಮ ಪಂಚಾಯತ್ ಸದಸ್ಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸನ್ಮಾನಿಸಲಾಯಿತು. ಮಕ್ಕಳ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಮ್ಯಾಕ್ಸಿo‌ ಅಲ್ಬುರ್ಕ, ಕಾರ್ಯದರ್ಶಿ ವಾಸುದೇವ ಗೌಡ, ಮಡಂತ್ಯಾರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ಎ.ಎಸ್., ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸಂಗೀತ ಶೆಟ್ಟಿ, ಕಿಶೋರ್ ಕುಮಾರ್, ವಿಶ್ವನಾಥ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ವಸoತಿ ಲಕ್ಷ್ಮಣ್, ಮಾಲಾಡಿ ಪಂಚಾಯತ್ ಉಪಾಧ್ಯಕ್ಷ ಸೆಲೆಸ್ಟಿನ್, ಗ್ರಾಮ ಪಂಚಾಯತ್ ಪಿಡಿಒ ಶ್ರೀನಿವಾಸ್, ರೋಟರಿ ಕ್ಲಬ್ ಸದಸ್ಯ ಜೆರಾಲ್ಡ್ ಮಿರಾಂದ ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆ ಹಾಗೂ ಸಹಾಯಕಿ ಊರಿನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here