






ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ/ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಸಜಾತಿ ಬಾಂಧವರ 2025ರ ಕ್ರೀಡಾಕೂಟವು ಶಕ್ತಿನಗರ ನವಶಕ್ತಿ ಕ್ರೀಡಾಂಗಣದಲ್ಲಿ ಡಿ. 28ರಂದು ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ನಡಿಬೊಟ್ಟು ಧರ್ಮದರ್ಶಿ ರವಿ ಎನ್. ನೆರವೇರಿಸಲಿದ್ದಾರೆ. ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸೇವಾ ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜರಗಲಿದೆ. ಪುರುಷರಿಗೆ ವಾಲಿಬಾಲ್, ಕಬಡ್ಡಿ, ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಹಗ್ಗ ಜಗ್ಗಾಟ ಹಾಗೂ ಮಕ್ಕಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿದ್ದು ಕುಲಾಲ ಸಿಂಧೂರ ಟ್ರೋಪಿ ನೀಡಿ ಗೌರವಿಸಲಿದ್ದಾರೆ.









