






ಬೆಳ್ತಂಗಡಿ: ಕಳೆದ ಅವಧಿಯಲ್ಲಿ 40 ಕೋಟಿ ಅನುದಾನವನ್ನು ನಾವೂರು ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕೆಲಸಕ್ಕೆ ನೀಡಿದ ಶಾಸಕರನ್ನು ಸನ್ಮಾನಿಸಲಾಯಿತು. ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಜನರ ಬಳಿಗೆ ಬಂದು ಸಮಸ್ಯೆ ನಿರ್ವಹಿಸುವ ಕೆಲಸವನ್ನು ಮಾಡುತ್ತಿದ್ದೇವೆ. 38ನೇ ಜನಸ್ಪಂದನ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ್ದೇನೆ. ಎಲ್ಲಾ ಗ್ರಾಮ ಪಂಚಾಯಿತಿನಲ್ಲಿಯೂ ನಡೆಯಲಿದೆ. ರಾಜ್ಯದ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ಅವರು ಡಿ.26 ರಂದು ನಾವೂರು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಾವೂರು ಗ್ರಾಮಕ್ಕೆ ಬೆಳೆವಿಮೆ ರೈತರಿಗೆ ಸಿಗದೆ ವಂಚಿತರಗಿದ್ದಾರೆ. ಮಳೆಯ ಮಾಪನ ಸರಿ ಇಲ್ಲದ ಕಾರಣ ತೊಂದರೆ ಉಂಟಾಗಿದೆ. ಇದರಿಂದ ಜನರಿಗೆ ವಿಮೆಯ ಬಗ್ಗೆ ನಂಬಿಕೆ ಹೋಗುತ್ತದೆ. ಮುಂದಿನ ದಿನಗಳಲ್ಲಿ ಯಾರು ಹಣ ಪಾವತಿ ಮಾಡಲ್ಲ ಎಂದು ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಹೇಳಿದಾಗ ತೋಟಗಾರಿಕೆ ಇಲಾಖಾ ಅಧಿಕಾರಿ ಮಾತನಾಡಿ ಸರ್ಕಾರಕ್ಕೆ ಮನವಿಯನ್ನು ಮಾಡಿದ್ದೇವೆ. ಡಿಸೇಂಬರ್ ಅಂತ್ಯದೊಳಗೆ ಬರುತ್ತದೆ ಎಂದು ತಿಳಿಸಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ, ಪಂಚಾಯತ್ ಅಧ್ಯಕ್ಷೆ ಸುನಂದಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಅರಣ್ಯಧಿಕಾರಿ ತ್ಯಾಗರಾಜ್, ಬಂಗಾಡಿ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಗಣೇಶ್ ನಾವೂರು, ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಂಚಾಯತ್ ಉಪಾಧ್ಯಕ್ಷೆ ಮಮತಾ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.









