






ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತಶಾಸ್ತ್ರ ವಿಭಾಗವು ಭಾರತದ ಮಹಾನ್ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನರ ಜನ್ಮದಿನದ ಅಂಗವಾಗಿ ಡಿ. 22ರಂದು ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿದ್ಯಾ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಮನಿಶಾಂತ್ ನಾಯ್ಕ್ ಅವರು ರಾಷ್ಟ್ರೀಯ ಗಣಿತ ದಿನದ ಮಹತ್ವ ಮತ್ತು ಶ್ರೀನಿವಾಸ ರಾಮಾನುಜನರ ಜೀವನ ಹಾಗೂ ಸಾಧನೆಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದ ಭಾಗವಾಗಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮನಿಶಾಂತ್ ನಾಯ್ಕ್, ದ್ವಿತೀಯ ಬಹುಮಾನವನ್ನು ಪವಿತ್ರಾ ಮತ್ತು ತೃತೀಯ ಬಹುಮಾನವನ್ನು ಚಿನ್ಮಯಿ ಹಾಗೂ ತಪಸ್ಯ ಪಡೆದರು.









