ಪುಂಜಾಲಕಟ್ಟೆ: ಕಾರು ಬೈಕ್ ಅಪಘಾತ-ಬೈಕ್ ಸವಾರ ಮೃತ್ಯು

0

ಪುಂಜಾಲಕಟ್ಟೆ: ಪಿಲತಾಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ಅಪಘಾತವಾದ ನಡೆದ ಘಟನೆ ಡಿ. 29ರಂದು ನಡೆದಿದೆ. ಬೈಕ್ ಸವಾರ ಕುಕ್ಕಾಜೆ ನಿವಾಸಿ ಇಮ್ರಾನ್ ಮಂಚಿ( 40ವ) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತರು ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ದರು. ಮಂಗಳೂರು ಕಡೆಯಿಂದ ಪೊಲೀಸ್ ಓರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರು ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್‌ಗೆ ಡಿಕ್ಕಿಯಾಗಿದೆ. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

LEAVE A REPLY

Please enter your comment!
Please enter your name here