ಬುರುಡೆ ಪ್ರಕರಣ-ನ್ಯಾಯಾಲಯದ ಆದೇಶ ಜ.3ಕ್ಕೆ ಮುಂದೂಡಿಕೆ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಕ್ರಮಕ್ಕಾಗಿ ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾ ಲಯಕ್ಕೆ ಸಲ್ಲಿಕೆ ಮಾಡಿರುವ ವರದಿಯ ಮೇಲಿನ ವಿಚಾರಣೆ ಪೂರ್ಣ ಗೊಂಡಿದ್ದು ಡಿ. 29ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ನ್ಯಾಯಾಲಯ ಜ.3ಕ್ಕೆ ಮುಂದೂಡಿದೆ.

ಎಸ್‌ಐಟಿಯು ನ. 20ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ಚಿನ್ನಯ್ಯ ಸಹಿತ 6 ಮಂದಿಯನ್ನು ಆರೋಪಿಗಳನ್ನಾಗಿ ಉಲ್ಲೇಖೀಸಿ ವರದಿ ನೀಡಿದ್ದು, ತನಿಖೆ ವಿವರವನ್ನು ದಾಖಲಿಸಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡುವಂತೆ ಎಸ್‌ಐಟಿ ಪರ ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ಅವರು ವಾದ ಮಂಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಸೆಕ್ಷನ್ ನಡಿ ಸುಳ್ಳು ಸಾಕ್ಷಿಯ ಅಪರಾಧಕ್ಕಾಗಿ ಕಾನೂನು ಕ್ರಮಕ್ಕೆ ವಿನಂತಿಸಿ ಆರೋಪಿಗಳ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಎಸ್‌ಐಟಿ ಪರ ವಕೀಲರು ಕೆಲವೊಂದು ಮಹತ್ವದ ಅಂಶಗಳನ್ನು ನ್ಯಾಯಾಲಯದ ಮುಂದಿಟ್ಟು ಮುಂದಿನ ಕಾನೂನು ಕ್ರಮಕ್ಕಾಗಿ ವಿನಂತಿಸಿದ್ದರು. ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ವಾದವನ್ನು ಆಲಿಸಿ ಮುಂದಿನ ಆದೇಶವನ್ನು ಡಿ. 26, ನಂತರ ಡಿ. 29ಕ್ಕೆ ಕಾಯ್ದಿರಿಸಿದ್ದರು, ಇಂದು ಆದೇಶ ದಿನವನ್ನು ಜ.3ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here