






ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು ಡಿ.29ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಅರ್ಚಕ ರಾಮ ಕಾರಂತ್ ಸಚಿವೆಯನ್ನು ಗೌರವಿಸಿದರು.


ಸಂಸದ ಕ್ಯಾ, ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕರುಣಾಕರ ಶಿಶಿಲ, ಸಂದೀಪ್ ಅಮ್ಮುಡಂಗೆ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯರಾದ ನಾರಾಯಣ ಪೂಜಾರಿ, ಸುಂದರ ಗೌಡ, ವಿಮಲಾ, ರಮೇಶ್ ಶಿಶಿಲ, ಪ್ರೇಮ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.









