ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಧಾರ್ಮಿಕ ಸಭೆ

0

ಓಡಿಲ್ನಾಳ: ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು, ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ ಅವರು ಮೈರಲ್ಕೆ ಶ್ರೀರಾಮ ನಗರ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹೇಳಿದರು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸಂತಿ ಬಿ. ಶೆಟ್ಟಿ‌ ಮುಂಬೈ, ಬೆಳ್ತಂಗಡಿ ತಾಲೂಕು ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯ, ದುಗ್ಗಪ್ಪ ಪೊಕ್ಕಿ ಆಗಮಿಸಿದ್ದರು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್. ಅಡ್ಡ ಕೊಡoಗೆ ಉಪಸ್ಥಿತರಿದ್ದರು. ದಾನಿಗಳಾದ ವಸoತಿ ಡಿ. ಶೆಟ್ಟಿ ಮುoಬೈ ಅವರನ್ನು ಗೌರವಿಸಲಾಯಿತು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸoತರ್ಪನೆ ಜರಗಿತು. ಸುದೀಪ್ ಶೆಟ್ಟಿ ಸ್ವಾಗತಿಸಿ, ಚಿನ್ನಯ ಮೂಲ್ಯ ಪರಾರಿ ಕಾರ್ಯಕ್ರಮ ನಿರೂಪಿಸಿದರು. ವಿಮಾಲಾಕ್ಷ ಗೌಡ ಪಡ್ಪು ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here