








ಧರ್ಮಸ್ಥಳ: ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಡಿ.31ರಂದು ವಕಾಲತ್ತು ಸಲ್ಲಿಸಲಾಗುತ್ತದೆ. ರಾಜ್ಯದ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಹಿರಿಯ ನ್ಯಾಯವಾದಿ ಮಹೇಶ್ ಕುಮಾರ್ ಕಜೆ ವಕಾಲತ್ತು ಸಲ್ಲಿಸಲಿದ್ದು, ಮಧ್ಯಾಹ್ನ 2.30ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.









