






ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶಯದಲ್ಲಿ “ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಡಿ. 29 ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಾಕರ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಡಿ. ಎ. ರೆಹಮಾನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡುತ್ತಾ ತಂದೆ ತಾಯಿಯರನ್ನು ಗೌರವಿಸುವುದು, ಮುಂದಿನ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ಸದೃಢ ಪ್ರಜೆಗಳಾಗಿ ಬಾಳಿ ಸಮಾಜವನ್ನು ಮಾದಕ ಮುಕ್ತ ಸಮಾಜವನ್ನಾಗಿಸಬೇಕೆಂದು ಮಕ್ಕಳಿಗೆ ಉತ್ತಮವಾಗಿ ಮನಮುಟ್ಟುವಂತೆ ವಿವರಿಸಿ ಕಿವಿಮಾತು ಹೇಳಿದರು
ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡುತ್ತಾ ಮಕ್ಕಳು ದುಶ್ಚಟಗಳಿಂದ ದೂರ ಇರುವಂತೆ ತಿಳಿಸಿದರು. ಸೇವಾ ಪ್ರತಿನಿಧಿ ಪ್ರಮೀಳ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿದರು. ಶಿಕ್ಷಕ ಕಿರಣ್ ವಂದಿಸಿದರು.









