






ಶಿಶಿಲ: ಗ್ರಾಮ ಪಂಚಾಯತ್, ಆಯುಷ್ಮಾನ್ ಆರೋಗ್ಯ ಮಂದಿರ, ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ, ಸ್ತ್ರೀ ಶಕ್ತಿ ಸಂಘಗಳು ಸೇರಿದಂತೆ ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಬಗ್ಗೆ ಮಾಹಿತಿ ಶಿಬಿರವು ವೈಕುಂಠಪುರ ಸಮುದಾಯ ಭವನದಲ್ಲಿ ಜರುಗಿತು.




ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಅಧ್ಯಕ್ಷ ರಾಮಚಂದ್ರ ಕೆ., ವಾಲ್ಮೀಕಿ ಆಶ್ರಮ ಶಾಲಾ ಮುಖ್ಯಗುರು ಕರುಣಾಕರ, ಸೃಷ್ಟಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ,
ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಕಾರ್ಯದರ್ಶಿ ವಿವೇಕಾನಂದ, ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರರಾದ ಶಾರದಾ ಉಪಸ್ಥಿತರಿದ್ದರು.

ಕಿರು ನಾಟಕದ ಮೂಲಕ ಹಾವು ಕಡಿತದ ಬಳಿಕ ಮಾಡಬೇಕಾದ ಹಾಗೂ ಮಾಡಬಾರದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಆಯುಷ್ಮಾನ್ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರಾ ಹಾವು ಕಡಿತದ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸವಿಸ್ತಾರ ಮಾಹಿತಿಯನ್ನು ನೀಡಿದರು. ಕೃಷಿ ಸಖಿ ಸುಮಾ ಸಂಜಯ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಯುವಕಮಂಡಲದ ಸದಸ್ಯರು ಹಾಗೂ ವಾಲ್ಮೀಕಿ ಆಶ್ರಮ ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









